ನಾರಾಯಣ ಗುರು ಜಯಂತಿ ೧೮ರಂದು ಕಲಬುರಗಿಯಲ್ಲಿ

Narayana Guru Jayanthi
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಸೆಪ್ಟೆಂಬರ್ ೧೮ರಂದು ಮಧ್ಯಾಹ್ನ ೧೨ಕ್ಕೆ ನಗರದ ಡಾ.ಎಸ್.ಎಂ.ಪAಡಿತ್ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು.  
ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾಪೌರರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ.ಗಣೇಶ ಆಮೀನ್ ಸಂಕಮಾರ್ ವಿಶೇಷ ಉಪನ್ಯಾಸ ನೀಡುವರು. ಕಲಬುರಗಿ ತೆಲ್ಲೂರ್ ಬಸಯ್ಯ ಗುತ್ತೇದಾರ್ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net