ನಾರಾಯಣಗೌಡ ಬಿಡುಗಡೆಗೆ ಸಂತಸ

08M.D.R.1 S.ASHOK (1)
ಕರವೇ ಅಧ್ಯಕ್ಷ ಎಸ್.ಅಶೋಕ್
Published on

ಮದ್ದೂರು: ಕರ್ನಾಟಕ ರಕ್ಷಣಾ ವೇದಿಕೆ(ಕರವೇ)ಅಧ್ಯಕ್ಷ ಎ.ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿರುವುದಕ್ಕೆ ತಾಲೂಕು ಕರವೇ ಅಧ್ಯಕ್ಷ ಎಸ್.ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಾರಾಯಣಗೌಡ ಅವರ ನೇತೃತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆದಿತ್ತು. ಆ ಸಂದರ್ಭ ಅವರನ್ನು ಏಕಾಏಕಿ ಬಂಧಿಸಲಾಗಿತ್ತು. ಇದೀಗ ಅವರಿಗೆ ಬಿಡುಗಡೆ ಭಾಗ್ಯ ದೊರೆತಿರುವುದು ಖುಷಿ ತಂದು ಕೊಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net