31ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

nnnnnnnnnnnnnn
Published on


ಮಂಗಳೂರು : ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆ.31ರಂದು ಸಾಯಂಕಾಲ 4ಕ್ಕೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಸಂತ ಆಗ್ನೆಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ ಅವರು ನಾರಾಯಣ ಗುರು ಜಯಂತಿಯ ಸಂದೇಶ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net