ವೃತ್ತಕ್ಕೆ ಬ್ರಹ್ಮಶ್ರೀ ಹೆಸರು, ಅಪಸ್ವರ ಸಲ್ಲ

billava
Published on

ಮೂಲ್ಕಿ: ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡುವ ವಿಚಾರದಲ್ಲಿ ಅಪಸ್ವರ ವ್ಯಕ್ತಗೊಂಡಿದ್ದು, ಇದು ಸರಿಯಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಬಿರುವೆರ್ ಕುಡ್ಲದ ಜಿಲ್ಲಾ ವಕ್ತಾರ ಲಕ್ಷ್ಮೀಶ್ ಸುವರ್ಣ ಹೇಳಿದರು.

ಬಿರುವೆರ್ ಕುಡ್ಲ ಮಂಗಳೂರು ವತಿಯಿಂದ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಹೆಸರಿಡುವ ಬಗ್ಗೆ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಸಂಘದ ಅಧ್ಯಕ್ಷ ರಮೇಶ್ ಅಮೀನ್ ಕೊಕ್ಕರಕಲ್ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಬಡಗುಹಿತ್ಲು, ಮಾಜಿ ಅಧ್ಯಕ್ಷ ಯದೀಶ್ ಅಮೀನ್ ಕೊಕ್ಕರಕಲ್ ಮಾತನಾಡಿದರು.

ಲಯನ್ಸ್ ಕ್ಲಬ್ ವಲಯ ನಿರ್ದೇಶಕ ಉದಯ್ ಅಮೀನ್ ಮಟ್ಟು, ನಾರಾಯಣ ಗುರು ಸೇವಾದಳದ ದಳಪತಿ ಹಾಗೂ ಬಿರುವೆರ್ ಕುಡ್ಲ ಮೂಲ್ಕಿ ಘಟಕ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ ಅಧ್ಯಕ್ಷೆ ಅಂಬಾವತಿ ಅಮೀನ್ ಅಭಿಪ್ರಾಯ ವ್ಯಕ್ತಪಡಿಸಿದರು. ಬಿರುವೆರ್ ಕುಡ್ಲ ಮೂಲ್ಕಿ ಘಟಕ ಅಧ್ಯಕ್ಷ ಕಿಶೋರ್ ಸಾಲ್ಯಾನ್ ಬಪ್ಪನಾಡು, ಸಂಘದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಬಡಗಹಿತ್ಲು, ಕೋಶಾಧಿಕಾರಿ ಪ್ರಕಾಶ್ ಸುವರ್ಣ, ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ದಿವಾಕರ್ ಕೋಟ್ಯಾನ್ ಉಪಸ್ಥಿತರಿದ್ದರು. ಕಮಲಾಕ್ಷ ಬಡಗಹಿತ್ಲು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net