

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ ಬನ್ನಂಜೆ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಆಗಸ್ಟ್ 31 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಎಸ್.ಎಲ್.ಭೋಜೆಗೌಡ ಹಾಗೂ ಡಾ.ತೇಜಸ್ವಿನಿ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಮತ್ತಿತರರು ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ್ ಅಮೀನ್ ಸಂಕಮಾರ್ ಉಪನ್ಯಾಸ ನೀಡಲಿದ್ದಾರೆ.