ಸೆ. 7 ರಂದು ನಾರಾಯಣ ಗುರು ಜಯಂತಿ

Deadline for purchasing FAQ sunflowers
Published on

ವಿಜಯಪುರ : ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸೆ. 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸುವರು. ಕೃಷಿ ಮಾರುಕಟ್ಟೆಯ ಸಚಿವ ಶಿವಾನಂದ ಪಾಟೀಲ ಗೌರವ ಉಪಸ್ಥಿತಿ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್​., ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್​ಡಿ ನಿಗಮದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ.

ಡಾ. ಎಂ.ಎಸ್​. ಮಾಗಣಗೇರಿ ವಿಶೇಷ ಉಪನ್ಯಾಸ ಹಾಗೂ ದಾನಮ್ಮ ಕೋರಿ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net