ಬಿಲ್ಲವ ಯುವ ವೇದಿಕೆ ಗುರು ಸಂದೇಶ ಸಾಮರಸ್ಯ ಜಾಥಕ್ಕೆ ಚಾಲನೆ

udp-3-jatha
Published on

ಉಡುಪಿ: ನಾರಾಯಣ ಗುರುಗಳ ಸಂದೇಶವನ್ನು ಸಾರುವುದರಿಂದ ಸಮಾಜದಲ್ಲಿ ಒಗ್ಗಟ್ಟು ಸಾಧ್ಯವಾಗಲಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಆನಂದಿ ಹೇಳಿದರು.

 ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಕ್ಕೆ ಬನ್ನಂಜೆ ನಾರಾಯಣಗುರು ಮಂದಿರದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಪಕ್ಕಿಬೆಟ್ಟು ಶ್ರೀಬ್ರಹ್ಮ ಬೈದರ್ಕಳ ಗರೋಡಿ ಅಧ್ಯಕ್ಷ ವಿಠಲ ಪೂಜಾರಿ,  ಜೀವರಕ್ಷಕ ಈಶ್ವರ ಮಲ್ಪೆ, ಸಮಾಜ ಸೇವಕ ಸತೀಶ್ ಸುವರ್ಣ ಜಾಥ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಿಟ್ಟೂರು ಬಾಳಿಗಾ ಫಿಶ್ನೆಟ್ನ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಉದ್ಯಮಿಗಳಾದ ಭಾಸ್ಕರ್ ಜತ್ತನ್, ಪ್ರಭಾಕರ ಪೂಜಾರಿ, ವೇದಿಕೆಯ ಗೌರವಾಧ್ಯಕ್ಷ ದಿವಾಕರ್ ಸನಿಲ್, ಜಿಪಂ ಮಾಜಿ ಸದಸ್ಯರಾದ ಜನಾರ್ದನ ತೋನ್ಸೆ, ಗೀತಾಂಜಲಿ ಸುವರ್ಣ, ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಶು ಕಲ್ಮಾಡಿ, ಉಪಾಧ್ಯಕ್ಷರಾದ ವಿಜಯ ಕೋಟ್ಯಾನ್, ಎನ್.ಮಹೇಶ್ ಕುಮಾರ್, ಕೋಶಾಧಿಕಾರಿ ಅನಿಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಶರತ್ ಜತ್ತನ್ನ ಉಪಸ್ಥಿತರಿದ್ದರು. ವೇದಿಕೆಯ ಜಿಲ್ಲಾಧ್ಯಕ್ಷ ಪ್ರವಿಣ್ ಎಂ. ಪೂಜಾರಿ ಸ್ವಾಗತಿಸಿದರು. ದಯಾನಂದ ಕರ್ಕೇರ ಉಗ್ಗೇಲ್ಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net