ಲೇಡಿಹಿಲ್ ನಾರಾಯಣ ಗುರುಗಳ ವೃತ್ತಕ್ಕೆ ಶಿಲಾನ್ಯಾಸ

narayana
Published on

ಮಂಗಳೂರು: ನಗರದ ಲೇಡಿಹಿಲ್ ಶಾಲೆಯ ಹತ್ತಿರ ಇರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವೃತ್ತಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.


ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ಕುಮಾರ್, ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಸುಂದರವಾದ ನಾರಾಯಣ ಗುರು ಅವರ ವೃತ್ತವನ್ನು ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಮೂಲಕ ಗುರುಗಳು ಪಾದಸ್ಪರ್ಶ ಮಾಡಿದ ಮಂಗಳೂರಿಗೆ ವಿಶೇಷವಾದ ಆಯಾಮ ನೀಡಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ವಿಶೇಷ ಅಭಿವೃದ್ದಿ ಚಟುವಟಿಕೆಗೆ ಚಾಲನೆ ನೀಡಲಾಗಿದೆ, ನಾರಾಯಣ ಗುರುಗಳ ಹೆಸರಿನ ಮೂಲಕ ಸಮಾಜದಲ್ಲಿ ಸಾಮರಸ್ಯ ಮೂಡಬೇಕು ಮತ್ತು ಅಭಿವೃದ್ಧಿಗೆ ಹೊಸ ಆಯಾಮವನ್ನು ಸೃಷ್ಟಿಸಲು ಚಿಂತಿಸಲಾಗಿದೆ ಎಂದು ಹೇಳಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಡಾ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net