*ದಿ.ಜಾರ್ಜ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ : ನಾರಾಯಣಗುರು ಕಾಲೇಜು ತಂಡಕ್ಕೆ ಪ್ರಥಮ ಸ್ಥಾನ

ttttttttttt
Published on



ಮಂಗಳೂರು : ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ ದಿ.ಜಾರ್ಜ್ ಫೆರ್ನಾಂಡಿಸ್ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ನಗರದ ಮಂಗಳಾ ಕ್ರೀಡಾಂಗಣದ ಬಳಿ ನಡೆದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟದ ಪುರುಷರ ವಿಭಾಗದಲ್ಲಿ ಮಂಗಳೂರಿನ ನಾರಾಯಣಗುರು ಕಾಲೇಜು ತಂಡ ಪ್ರಥಮ ಸ್ಥಾನ ಗಳಿಸಿದೆ. ಆಳ್ವಾಸ್ ಕಾಲೇಜು ಮೂಡುಬಿದಿರೆ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಮಹಿಳೆಯರ ವಿಭಾಗದಲ್ಲಿ ಸ್ಟೇಡಿಯಂ ಫ್ರೆಂಡ್ಸ್ ಮಂಗಳೂರು ತಂಡ ಪ್ರಥಮ ಹಾಗೂ ಎಸ್‌ಡಿಎಂ ಉಜಿರೆ ತಂಡ ದ್ವಿತೀಯ ಸ್ಥಾನ ಗಳಿಸಿದೆ.
ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿದ ಸಾಮಾಜಿಕ ಕಾರ್ಯಕರ್ತೆ ರೇವತಿ ಸನಿಲ್ ಮಾತನಾಡಿ ‘ ಸಾಮಾಜಿಕ ಕಳಕಳಿ ಹಾಗೂ ರಾಷ್ಟ್ರೀಯ ಹಿತಾಸಕ್ತಿಗಾಗಿ ತನ್ನ ಸಂಪೂರ್ಣ ಜೀವನವನ್ನು ಮುಡುಪಾಗಿರಿಸಿದ ಜಾರ್ಜ್ ಫೆರ್ನಾಂಡಿಸ್ ಅವರು ಭಾರತ ಕಂಡ ರಾಜಕೀಯ ಸಂತ ’ಎಂದರು. ಮಾಜಿ ಎನ್‌ಐಎಸ್ ವಾಲಿಬಾಲ್ ತರಬೇತುದಾರ ನಾರಾಯಣ ಆಳ್ವ, ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್‌ನ
ಪ್ರಧಾನ ಕಾರ್ಯದರ್ಶಿ ಶಂಕರ್ ಶೆಟ್ಟಿ, ರಾಜ್ಯ ವಾಲಿಬಾಲ್ ಆಟಗಾರ ಆಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕ್ರೈಸ್ತ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೋಯ್ ಕ್ಯಾಸ್ಟಲಿನೊ, ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ಸಾಹುಕಾರ್ ಎಂ. ಕಿರಣ್ ಪೈ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರು, ಉದ್ಯಮಿ ವಾಲ್ಟರ್ ಮೊಂತೆರೊ, ಹಿರಿಯ ಪತ್ರಕರ್ತ ಆನಂದ ಶೆಟ್ಟಿ, ಮಾಜಿ ಕಾರ್ಪೋರೇಟರ್ ನವೀನ್‌ಚಂದ್ರ ಕೆ., ಮಣ್ಣಗುಡ್ಡ ಯೋಗೀಶ್ ಆಚಾರ್ ಆಗಮಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್,ಪ್ಲೇವಿಯಾ ಪಾಸ್, ಅರುಣ್ ಬ್ಯಾಪ್ಟಿಸ್ಟ್, ಮಮತಾ, ವೇದಿಕೆಯ ಪ್ರಮುಖರಾದ ರೋಶನ್
ಡಿಸೋಜ, ಮೆಲ್ವಿನ್ ಪೆರಾವೊ, ಲೀನಾ ಡಿಸಿಲ್ವ, ಅರುಣ್ ಡಿಸೋಜ ಉರ್ವ, ಪ್ರೀತಿ ಮಿನೇಜಸ್ , ನವೀನ್ ಫೆರ್ನಾಂಡಿಸ್, ಐರಿನ್ ಮಸ್ಕರೇನ್ಹಸ್, ಫೆಲಿಕ್ಸ್ ಡಿಸೋಜ ಉಪಸ್ಥಿತರಿದ್ದರು. ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೊ ಸ್ವಾಗತಿಸಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸಿಲ್ವಿಯಾ ರುತ್ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net