ನಾರಾಯಣಪುರ, ಆಲಮಟ್ಟಿ ಜಲಾಶಯಕ್ಕೆ ತಗ್ಗಿದ ಒಳಹರಿವು, ಶಾಂತವಾದ ಕೃಷ್ಣೆ, ಡ್ಯಾಂನಿಂದ 13ಸಾವಿರ ಕ್ಯೂಸೆಕ್ ಹೊರಕ್ಕೆ

250720 Huvinahedagi Bridge
ದೇವದುರ್ಗ ತಾಲೂಕು ಹೂವಿನಹೆಡಗಿ ಸೇತುವೆಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿರುವುದು.
Published on

ದೇವದುರ್ಗ: ಮಹಾರಾಷ್ಟ್ರ ಸೇರಿ ಕೃಷ್ಣಾ ಮೇಲ್ಭಾಗದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವು ಇಳಿಕೆಯಾಗಿದೆ. ಇದರಿಂದ ಕೃಷ್ಣಾ ನದಿಗೆ ಬಿಡುತ್ತಿದ್ದ ನೀರಿನ ಪ್ರಮಾಣ ತಗ್ಗಿದೆ.

ಎರಡ್ಮೂರು ದಿನಗಳಿಂದ ಮಳೆ ನಿಂತ ಕಾರಣ ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣ ನೀರು ಹರಿದು ಬರುತ್ತಿಲ್ಲ. ಸದ್ಯ ನಾರಾಯಣಪುರ ಜಲಾಶಯದಲ್ಲಿ 30.5 ಟಿಎಂಸಿ ಅಡಿ ನೀರಿನ ಸಂಗ್ರಹವಿದ್ದು, 17 ಸಾವಿರ ಕ್ಯೂಸೆಕ್ ಒಳಹರಿವಿದೆ. ಜಲಾಶಯದ ಎರಡು ಕ್ರಸ್ಟ್‌ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ 13,994 ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದ್ದರಿಂದ ಜಲಾವೃತವಾಗಿದ್ದ ಹೂವಿನಹೆಡಗಿಯ ಶ್ರೀ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ತೆರವಾಗಿದ್ದು, ಕೊಪ್ಪರದ ಲಕ್ಷ್ಮಿನರಸಿಂಹ ದೇವಸ್ಥಾನ ಹಾಗೂ ಗೂಗಲ್‌ನ ಶ್ರೀ ಅಲ್ಲಮ ಪ್ರಭು ದೇವಸ್ಥಾನ ಸುತ್ತುವರಿದಿದ್ದ ನೀರು ಇಳಿಕೆಯಾಗಿದೆ. ಹೂವಿನಹೆಡಗಿ ಹಾಗೂ ತಿಂಥಣಿ ಬ್ರಿಡ್ಜ್‌ನಲ್ಲಿ ನೀರಿನ ಪ್ರಮಾಣ ಸಂಪೂರ್ಣ ತಳಕಂಡಿದೆ. ಆಲಮಟ್ಟಿ ಜಲಾಶಯಕ್ಕೆ 17,417 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 11746 ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 85 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net