ಸಮಾಜ ಸುಧಾರಕರಾಗಿ ಉದಯಿಸಿದವರು ನಾರಾಯಣಗುರು

20 ckm 2
ಚಿಕ್ಕಮಗಳೂರಿನ ಜಿಲ್ಲಾ ಬಿಎಸ್‌ಪಿ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಮಂಗಳವಾರ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕೆ.ಟಿ.ರಾಧಾಕೃಷ್ಣ, ಬಿ.ಕೆ.ಸುಧಾ, ಕೆ.ಎಸ್.ಮಂಜುಳಾ, ಪಿ.ವಿ.ತಂಬನ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಸಮಾಜದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ನಾರಾಯಣ ಗುರುಗಳು ಸಮಾಜ ಸುಧಾರಕರಾಗಿ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ತಿಳಿಸಿದರು.

ನಗರದ ಜಿಲ್ಲಾ ಬಿಎಸ್‌ಪಿ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಅಂಗವಾಗಿ ಮಂಗಳವಾರ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಒಂದೇಜಾತಿ, ಒಂದೇ ಮತ ಹಾಗೂ ಒಂದೇ ದೇವರೆಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊAಡರು ಎಂದರು.
ಶ್ರೀ ನಾರಾಯಣ ಗುರುಗಳು ಕೋಮು ಸೌಹಾರ್ದತೆ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಸಾಕಾರಗೊಳಿಸಿದರು. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಹೆಚ್ಚು ಮಾನವೀಯ ಮತ್ತು ಸಮಾನತೆಯ ಸಮಾಜವಾಗಿ ಅಭಿವೃದ್ಧಿ ಹೊಂದಿತು. ಈ ತತ್ವವು ಕೇರಳ ರಾಜ್ಯಕ್ಕೆ ಒಂದು ಜೀವನ ವಿಧಾನವಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದAತಹ ಸಂದರ್ಭದಲ್ಲಿ ಕೆಳವರ್ಗದ ಜನರಿಗೆ ದೇವಾಲಯ ಪ್ರವೇಶವಿಲ್ಲದಂತಹ ಕಾಲದಲ್ಲಿ ನಾರಾಯಣ ಗುರುಗಳು ಐವತ್ತಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಿಸಿ ಮಾನವತ್ವದಿಂದ ದೈವತ್ವದೆಡೆಗೆ ಹೋಗಬಹುದು ಎನ್ನುವುದಕ್ಕೆ ನಾರಾಯಣ ಗುರುಗಳು ಉದಾಹರಣೆ ಎಂದರು.
ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ, ಸಮಾಜದ ಎಲ್ಲ ಜಾತಿಗಳ ಜನರೂ ಒಗ್ಗೂಡಿ ಬದುಕಿದಾಗ ಮಾತ್ರ ನಾರಾಯಣ ಗುರು ಆಚರಣೆಗೆ ಅರ್ಥ ಮೂಡಲಿದೆ. ಹೀಗಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರ ನಾರಾಯಣ ಗುರುಗಳ ಆದರ್ಶ ಮತ್ತು ತತ್ವ ಸಿದ್ಧಾಂತಗಳನ್ನು ಎಲ್ಲ ಸಮುದಾಯದ ಜನರು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷೆ ಕೆ.ಎಸ್.ಮಂಜುಳಾ, ಕಚೇರಿ ಕಾರ್ಯದರ್ಶಿ ಪಿ. ವಿ. ತಂಬನ್, ಅಸೆಂಬ್ಲಿ ಪ್ರಧಾನ ಕಾರ್ಯದರ್ಶಿ ಆರ್.ವಸಂತ್, ಉಪಾಧ್ಯಕ್ಷರಾದ ಹೊನ್ನಪ್ಪ, ಸಿದ್ದಯ್ಯ, ಖಜಾಂಚಿ ಟಿ.ಎಚ್.ರತ್ನ, ಗಿರೀಶ್, ಉಪನ್ಯಾಸಕರಾದ ಉಮಾಶಂಕರ್, ಪ್ರಮುಖರಾದ ಸಿರವಾಸೆ ಕಿಶೋರ್, ರಾಮನಹಳ್ಳಿ ರವಿ, ಗಿಡ್ಡಯ್ಯ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net