ನಾರಾಯಣಗುರು ಸಂದೇಶ ಅನುಷ್ಠಾನ ಮಾದರಿ : ಬೇಬಿ ಕುಂದರ್ ಬಣ್ಣನೆ

Btw_Yuvavahini 05
Published on

ಬಂಟ್ವಾಳ: ನಾರಾಯಣಗುರುಗಳ ಸಂದೇಶ ಅನುಷ್ಠಾನ ಮಾಡುತ್ತಿರುವ ಯುವವಾಹಿನಿ ಸಂಸ್ಥೆಯ ಕಾರ್ಯ ಮಾದರಿ ಎಂದು ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ, ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಅವರ ಮನೆಯಲ್ಲಿ ಗುರುತತ್ವವಾಹಿನಿ ಮಾಲಿಕೆ 32ರಲ್ಲಿ ಗುರು ಸಂದೇಶ ನೀಡಿದರು.

ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಪಂ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಘಟಕದ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ಕೋಶಾಧಿಕಾರಿ ಗೀತಾ ಜಗದೀಶ್, ನಿರ್ದೇಶಕ ಮಹೇಶ್ ಬೊಳ್ಳಾಯಿ, ಉದಯ್ ಮೆನಾಡ್, ಶೃಜನಿ ಬೊಳ್ಳಾಯಿ, ಮಧುಸೂದನ್ ಮಧ್ವ, ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕೆ., ರಾಜೇಶ್ ಸುವರ್ಣ, ಅರುಣ್ ಕುಮಾರ್, ಸದಸ್ಯರು ಉಪಸ್ಥಿತರಿದ್ದರು. ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net