ಚೆನ್ನಯ್ಯನ ಕೋಟೆ ಗ್ರಾಮದಲ್ಲಿ ನರೇಗಾ ದಿವಸ ಆಚರಣೆ

ಚಿತ್ರ 02ಎಸ್ ಡಿ ಪಿ 04
Published on


ಮಡಿಕೇರಿ: ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಶುಕ್ರವಾರ ನರೇಗಾ ದಿವಸ ಆಚರಿಸಲಾಯಿತು.


ಸಿದ್ದಾಪುರದ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರಾ ಅರುಣ್ ಕುಮಾರ್ ಮಾತನಾಡಿ, ಸಮಗ್ರ ಗ್ರಾಮೀಣಾಭಿವೃದ್ಧಿಗೆ ನರೇಗಾ ಯೋಜನೆಯು ವರದಾನವಾಗಿದೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು.

ಗ್ರಾಮಗಳಲ್ಲಿ ನೈರ್ಮಲ್ಯ ಸಾಧಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಪ್ರತಿ ಮನೆಗೂ ವ್ಯವಸ್ಥಿತ ಚರಂಡಿ ಗುಂಡಿ ನಿರ್ಮಿಸಲಾಗುತ್ತಿದೆ. ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಂಡು ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.


ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಮಾತನಾಡಿ, ನರೇಗಾ ಯೋಜನೆಯು ಕೇವಲ ಕೂಲಿಗಾಗಿ ಕೆಲಸ ಮಾಡುವ ಯೋಜನೆ ಅಲ್ಲ. ಈ ಯೋಜನೆಯಡಿ ಪ್ರತಿ ಗ್ರಾಮವನ್ನು ಅಭಿವೃದ್ಧಿ ಗೊಳಿಸುವ ಮೂಲಕ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬಹುದು ಎಂದರು.


ನರೇಗಾ ಯೋಜನೆಯಡಿ ನೂರು ದಿನ ಕೆಲಸ ಮಾಡಿದ ಅಕುಶಲ ಕೆಲಸಗಾರರಿಗೆ ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭ ಗ್ರಾಪಂ ಉಪಾಧ್ಯಕ್ಷೆ ಕಾವೇರಿ, ಸದಸ್ಯರಾದ ವಿಜು, ಶಿವಲಿಂಗ, ಮಂಜುಳಾ, ಪಂಚಾಯಿತಿ ಕಾರ್ಯದರ್ಶಿ ಮುತ್ತುರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net