ಹೃದಯಘಾತದಿಂದ ನರೇಗಾ ಕಾರ್ಮಿಕ ಮಹಿಳೆ ಸಾವು

b8f21f2539534e81a149d33c8221b887.jpg
Published on


ಕಡೋಲಿ : ತಾಲೂಕಿನ ಕಡೋಲಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಕಡೋಲಿ ಗ್ರಾಮದ ಪೇಠ ಗಲ್ಲಿಯ ನಂದಾ ಸದಾನಂದ ಕುಟ್ರೆ (55) ಮೃತ ಮಹಿಳೆ. ಪತಿ, ಓರ್ವ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.
ಕಡೋಲಿ ಗ್ರಾಪಂ ವ್ಯಾಪ್ತಿಯಲ್ಲಿ ಕೆರೆ ಹೂಳೆತ್ತು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮಹಿಳೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆಯಲ್ಲಿ ದಾರಿಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

--

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net