ನರೇಗಾ ಕೂಲಿ ಸಮರ್ಪಕ ಪಾವತಿಸಿ

20 Sirwar 2
Published on

ಸಿರವಾರ: ನರೇಗಾ ಸೇರಿ ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಗೆ ಸಂಬಂಧಪಟ್ಟ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ಜಿಪಂ ಯೋಜನಾ ನಿರ್ದೇಶಕರಾದ ಪ್ರಕಾಶ ವಿ. ಸೂಚನೆ ನೀಡಿದರು.

ಮಲ್ಲಟ ಗ್ರಾಪಂ ಕಚೇರಿಗೆ ಗುರುವಾರ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು. ನರೇಗಾ ಯೋಜನೆಯಡಿ ಕೆಲಸಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಕೂಲಿಕಾರರಿಗೆ ಸಕಾಲಕ್ಕೆ ಕೆಲಸ ನೀಡಬೇಕು ಮತ್ತು ಕೂಲಿ ಪಾವತಿಸಬೇಕು. ಸ್ವಚ್ಛ ಭಾರತ ಮಿಷನ್‌ನಡಿ ಕಸ ವಿಲೇವಾರಿ ವಾಹನಗಳ ಮೂಲಕ ಗ್ರಾಮದಲ್ಲಿ ಕಸ ಸಂಗ್ರಹಿಸಿ ಸ್ವಚ್ಛತೆ ಕಾಪಾಡಬೇಕೆಂದು ಸೂಚಿಸಿದರು.

ನಂತರ ಪಟಕನದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಶಾಲಾ ಮಕ್ಕಳೊಂದಿಗೆ ಮಧ್ನಾಹದ ಬಿಸಿಯೂಟ ಸೇವಿಸಿದರು. ಸರ್ಕಾರಿ ಶಾಲೆಗಳ ಬಿಸಿಯೂಟ ಕೇಂದ್ರಗಳಿಗೆ ವಿತರಿಸುತ್ತಿರುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಿಕೊಂಡು ಹೋಗಬೇಕೆಂದರು. ಮಕ್ಕಳೊಂದಿಗೆ ಸಂವಾದ ನಡೆಸಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಶಾಲಾ ಕಟ್ಟಡ ಸಮಸ್ಯೆ ಇತ್ಯರ್ಥಪಡಿಸಿ, ಶೀಘ್ರ ಕಟ್ಟಡ ನಿರ್ಮಾಣ ಮಾಡಬೇಕೆಂದರು. ತಾಂತ್ರಿಕ ಸಂಯೋಜಕ ವಿನೋದ ಕುಮಾರ್, ಪಿಡಿಒ ಖಾಜಾ ಪಾಷಾ, ಗ್ರಾ.ಪಂ ಸದಸ್ಯರು, ನರೇಗಾ ತಾಂತ್ರಿಕ ಸಿಬ್ಬಂದಿ, ಪಂಚಾಯಿತಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net