ನರೇಗಾ ಯೋಜನೆ ಬಡವರ ಸಂಜೀವಿನಿ - ಶಿವಾನಂದ ಶಿರಗಾಂವೆ

4747
Published on

ಚಿಕ್ಕೋಡಿ: ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದ ಬಡ ಕೂಲಿ ಕಾರ್ಮಿಕರಿಗೆ ಒಂದು ಸಂಜೀವಿನಿಯಾಗಿದೆ ಎಂದು ತಾಪಂ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ ಹೇಳಿದರು.

ತಾಲೂಕಿನ ಮುಗಳಿ ಗ್ರಾಮದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ (ನರೇಗಾ) ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆ ಹಳ್ಳಿಗಳ ಜನರಿಗೆ ಉದ್ಯೋಗ ನೀಡುವ ಕಾರ್ಯ ಮಾಡುತ್ತಿದೆ ಎಂದರು.

ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಮಿಕರು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು. ಕಾಮಗಾರಿ ನಡೆಯುವ ಸ್ಥಳದಲ್ಲಿ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ತಾಪಂ ಸದಸ್ಯ ಶಂಕರಗೌಡ ಪಾಟೀಲ ಮಾತನಾಡಿ, ಕೆಲಸ ಮಾಡುವವರಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದರು. ಗ್ರಾಪಂ ಅಧ್ಯಕ್ಷ ರಾಮಗೌಡ ಪಾಟೀಲ, ಪಿಡಿಒ ಚಂದ್ರಶೇಖರ ಕುಂಬಾರ, ಐಇಸಿ ಸಂಯೋಜಕ ರಂಜಿತ ಕಾಂಬಳೆ, ಕಾಂಚನಾ ಪಾಟೇಕರ, ಮಹಾದೇವ ಮಠಪತಿ ಹಾಗೂ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ವಿಠ್ಠಲ ಭಂತೆ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net