ನರೇಗಾ ಯೋಜನೆಯಡಿ ಆಡಳಿತ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

udyoga-narega
Published on

ಬಾಗಲಕೋಟೆ ಜಿಲ್ಲೆಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 9 ಆಡಳಿತ ಸಹಾಯಕ ಹಾಗೂ 1 ತಾಲೂಕು ಐಇಸಿ ಸಂಯೋಜಕ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಡಳಿತ ಸಹಾಯಕ ಹುದ್ದೆಗೆ ಬಿಕಾಂ ಪದವಿ ಪಡೆದಿದ್ದು, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್​ನಲ್ಲಿ ಪರಿಣಿತಿ ಜತೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಸಂಯೋಜಕ ಹುದ್ದೆಗೆ ಮಾಸ್ ಕಮ್ಯುನಿಕೇಷನ್​ನಲ್ಲಿ ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಬಾಗಲಕೋಟೆಯ ಜಿಲ್ಲಾ ಪಂಚಾಯತ್​ ಕಾರ್ಯಾಲಯದಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆ ಲಗತ್ತಿಸಿ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೇ ದಿನ: 15.9.2021

ವಿವರಗಳಿಗೆ ಸಂಪರ್ಕಿಸಿ: ಐಇಸಿ ಸಂಯೋಜಕ- 96114 89293

ಮಾಹಿತಿಗೆ: bagalkot.nic.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net