

ಹೂವಿನಹಡಗಲಿ: ಇಲಾಖೆಯಿಂದ ಹಳ್ಳಿ ಜನರಿಗೆ ಲಭ್ಯವಿರುವ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಅಶೋಕ ತೋಟದ ಹೇಳಿದರು.
ಇದನ್ನೂ ಓದಿ: ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಿ
ಪಟ್ಟಣದ ತಾಪಂ ರಾಜೀವಗಾಂಧಿ ಸಭಾಂಗಣದಲ್ಲಿ ನರೇಗಾ ಯೋಜನೆ ಕಾರ್ಮಿಕ ಕ್ರಿಯಾಯೋಜನೆ ಆನ್‌ಲೈನ್ ಮೂಲಕ ತಯಾರಿಸುವ ಕುರಿತು ಸೋಮವಾರ ಏರ್ಪಡಿಸಿದ್ದ ಪಿಡಿಒ ಹಾಗೂ ತಾಂತ್ರಿಕ ಸಹಾಯಕರ ಸಭೆಯಲ್ಲಿ ಮಾತನಾಡಿದರು.
ನರೇಗಾ ಯೋಜನೆಯಡಿ ಬರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇತರ ಚಟುವಟಿಕೆಗಳು ಸಮರ್ಪಕವಾಗಿ ನಡೆಯಬೇಕು. ಗ್ರಾಪಂ ಮಟ್ಟದ ಎಲ್ಲ ಅಧಿಕಾರಿಗಳು ಯಾವುದೇ ರೀತಿ ಲೋಪಗಳು ಆಗದಂತೆ ನೋಡಿಕೊಳ್ಳಬೇಕು ಎಂದರು.
ತಾಪಂ ಇಒ ಉಮೇಶ್ ಮೈನಹಳ್ಳಿ ಮಾತನಾಡಿ, ಕಳೆದ ವರ್ಷ ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಬಳಸಿಕೊಂಡು ಯಾವ ಭಾಗದಲ್ಲಿ ಅಭಿವೃದ್ಧಿ ಪಡೆಸಬೇಕಾಗಿದೆ ಎಂಬುದನ್ನು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ತಾಂತ್ರಿಕ ಸಹಾಯಕರು ಸಮರ್ಪಕವಾಗಿ ಕೆಲಸನಿರ್ವಹಿಸಬೇಕು ಎಂದರು. ನರೇಗಾ ಸಹಾಯಕ ನಿರ್ದೇಶಕ ವೀರಣ್ಣ ನಾಯ್ಕ, ತಾಪಂ ಎಡಿ ಹೇಮಾದ್ರಿನಾಯ್ಕ, ಸಿಡಿಪಿಒ ರಾಮನಗೌಡ ಇತರರಿದ್ದರು.