ಶೈಕ್ಷಣಿಕ ವರ್ಷದ ಸಮಾರೋಪ ಸಮಾರಂಭ 10ರಂದು

8-NAREGAL
Published on

ನರೇಗಲ್ಲ: ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ 2023- 24ನೇ ಶೈಕ್ಷಣಿಕ ವಷರ್ದ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್, ಎನ್‌ಸಿಸಿ, ರೇಂಜರ್ಸ್-ರೋವರ್ಸ್, ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆ ಸಮಾರೋಪ ಸಮಾರಂಭ ಮತ್ತು ಬಿಎ, ಬಿಕಾಂ, ಬಿಎಸ್‌ಸಿ ಪದವಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜು. 10ರಂದು ಬೆಳಗ್ಗೆ 11.30ಕ್ಕೆ ಕಾಲೇಜಿನ ಆವರಣದಲ್ಲಿ ಏರ್ಪಾಟಾಗಿದೆ. ಶಾಸಕ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಂಶುಪಾಲ ಈ.ಆರ್. ಲಗಳೂರ ಅಧ್ಯಕ್ಷತೆ ವಹಿಸುವರು. ಗುಡಗೇರಿ ಸರ್ಕಾರಿ ಪದವಿ ಕಾಲೇಜ್ ಪ್ರಾಧ್ಯಾಪಕ ಜಿ.ಸಿ. ಗುಮ್ಮಗೋಳಮಠ, ಭೂದಾನಿ ರಮೇಶ ಕಳಕೊಣ್ಣವರ, ಅಶೋಕ ಕಳಕೊಣ್ಣವರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಸಾಂಸ್ಕೃತಿಕ ವಿಭಾಗದ ಸಂಚಾಲಕ ಎಸ್.ಎಸ್. ಸೂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net