ಮೋದಿ ಪ್ರಧಾನಿಯಾಗಿರುವುದು ಹೆಮ್ಮೆಯ ವಿಷಯ: ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅಭಿಮತ

Bjp
Published on

ಮದ್ದೂರು: ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ನಾವು ಪಡೆದಿರುವುದು ಹೆಮ್ಮೆ ಪಡುವ ವಿಷಯ ಎಂದು ಮನ್‌ಮುಲ್ ನಿರ್ದೇಶಕ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

ಪಟ್ಟಣದ ಶಿವಪುರದ ಶ್ರೀಸೋಮೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಭಾರತೀಯ ಬಿಜೆಪಿ ಯುವ ಮೋರ್ಚಾ ಮದ್ದೂರು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ನರೇಂದ್ರ ಮೋದಿ ಅವರು ಕಠಿಣ ಪರಿಶ್ರಮಪಟ್ಟು ಕೆಲಸ ಮಾಡುವ ಮೂಲಕ ವಿಶ್ವವೇ ನಮ್ಮ ದೇಶದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವರ ಅಧಿಕಾರಾವಧಿಯಲ್ಲಿ ಭಾರದ ವಿಶ್ವ ಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಿಂದೆ ಭಾರತ ಎಂದರೆ ಕಡೆಗಣಿಸುತ್ತಿದ್ದ ವಿಶ್ವದ ಬೇರೆ ಬೇರೆ ದೇಶಗಳು ಇಂದು ಮೋದಿ ಅವರ ಅಧ್ಯಕ್ಷತೆಯಲ್ಲಿ ರಾಜಿ, ಸಂಧಾನ ಮಾಡಿಸಿಕೊಳ್ಳುವ ಜತೆಗೆ ಸಹಾಯವನ್ನು ಪಡೆದುಕೊಳ್ಳುತ್ತಿರುವುದು ಸಂತೋಷದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಜನ ಸೇವಕರಂತೆ ಕೆಲಸ ಮಾಡುವ ಮೂಲಕ ಎಲ್ಲ ವರ್ಗದ ಜನರಿಗೂ ಅನುಕೂಲ ಕಲ್ಪಿಸಿದ್ದಾರೆ. ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡು ಸಂಕಷ್ಟಲ್ಲಿರುವ ರೋಗಿಗಳಿಗೆ ಅನುಕೂಲ ಕಲ್ಪಿಸಲು ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದ್ದು, ರಕ್ತಕ್ಕೆ ಪರ್ಯಾಯವಾದ ಯಾವುದೇ ವಸ್ತುವಿಲ್ಲದ ಕಾರಣ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು.

ಮಂಡ್ಯ ವಿಶ್ವವಿದ್ಯಾನಿಲಯದ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿ ನಾಮ ನಿರ್ದೇಶಕ ಡಾ.ಇಂದ್ರೇಶ್ ಮಾತನಾಡಿ, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ವಿಶ್ವದಾಖಲೆ ಆಗುವಂತಹ ರಕ್ತದಾನ ಶಿಬಿರಗಳು ದೇಶವ್ಯಾಪಿ ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ರಕ್ತದಾನ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಧು ಗಂಗಾಧರ್, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕುಮಾರಸ್ವಾಮಿ, ತಾಲೂಕು ಅಧ್ಯಕ್ಷ ಪಿ.ಸಿ.ರಘು, ಯುವ ಮೋರ್ಚಾ ತಾಲೂಕು ಘಟಕದ ಅಧ್ಯಕ್ಷ ನಿಡಘಟ್ಟ ಸುನೀಲ್, ಪುರಸಭಾ ಸದಸ್ಯ ಮ.ನ.ಪ್ರಸನ್ನಕುಮಾರ್, ಮುಖಂಡರಾದ ಕೆಂಪುಬೋರಯ್ಯ, ಡಾ.ಸದಾನಂದ, ರಾಮೇಗೌಡ, ಹೊನ್ನಲಗೆರೆಸ್ವಾಮಿ, ಶ್ವೇತಾ, ಮಮತಾರಾಂಖ, ಸಿಂಧು, ಪೂರ್ಣಿಮಾ, ಮಹೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net