

ಸಿಂಧನೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ನಗರದಲ್ಲಿ ಭಾನುವಾರ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಪ್ರಮುಖರಾದ ನಿರುಪಾದೆಪ್ಪ ಜೋಳದರಾಶಿ, ಶಿವಕುಮಾರ ಹಿರೇಮಠ, ಮಹಾದೇವ ನಾಯಕ, ಮಂಜುನಾಥ ಅರಸೂರು ಇತರರಿದ್ದರು.