ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆ: ಸಚಿವ ದಿನೇಶ್ ಗುಂಡೂರಾವ್ ಕಿಡಿ

mysore
Published on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು.


ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳಿಗೆ ಅನುದಾನ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಪ್ರತಿಪಕ್ಷಗಳನ್ನು ಹತ್ತಿಕ್ಕಲು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.


ದೇಶದಲ್ಲಿರುವ ಬಿಜೆಪಿಯೇತರ ಸರ್ಕಾರಗಳನ್ನು ಮೋದಿ ಸಹಿಸುತ್ತಿಲ್ಲ. ಹೇಗಾದರೂ ಮಾಡಿ ಸರ್ಕಾರಗಳನ್ನು ಬೀಳಿಸುವ ತಂತ್ರ ಮಾಡುತ್ತಿದ್ದಾರೆ. ಸರ್ಕಾರಗಳನ್ನು ಬೀಳಿಸುವುದು ಬಿಜೆಪಿಯ ಹುಟ್ಟುಗುಣ. ಜಾರ್ಖಂಡ್ ಸೇರಿದಂತೆ ಹಲವು ಕಡೆ ಇದು ನಡೆದಿದೆ. ಇದಕ್ಕಾಗಿ ತನಿಖಾ ಸಂಸ್ಥೆಗಳನ್ನೂ ಬಳಸಿಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.

‘ಕಾಂಗ್ರೆಸ್ ದೇಶ ಒಡೆಯುವ ಮನಸ್ಥಿತಿಯಲ್ಲಿದೆ’ ಎಂಬ ಪ್ರಧಾನಿ ನರೇಂದ್ರಮೋದಿ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು, ಬಿಜೆಪಿ ಯಾವತ್ತೂ ದೇಶ ಕಟ್ಟುವ ಕೆಲಸ ಮಾಡಿಲ್ಲ. ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಡಿದಾಗ ಹಿಂದು ಮಹಾಸಭಾದವರು ಬ್ರಿಟಿಷರ ಪರ ಇದ್ದರು.

ಪಾಕಿಸ್ತಾನವನ್ನು ಇಬ್ಭಾಗ ಮಾಡಿದ್ದು ನಾವೇ, ಅದನ್ನು ಹೊರತುಪಡಿಸಿ ಎಲ್ಲವನ್ನೂ ಒಗ್ಗೂಡಿಸಿದ್ದೇವೆ. ಆರ್‌ಎಸ್‌ಎಸ್, ಹಿಂದು ಮಹಾಸಭಾ ಸ್ವಾತಂತ್ರ್ಯ ಹೋರಾಟದಲ್ಲಿ ಎಂದಿಗೂ ಭಾಗಿಯಾಗಿಲ್ಲ. ಅವರು ದೇಶ ಭಕ್ತರಲ್ಲವೆಂದು ಹೇಳುವುದಿಲ್ಲ. ಆದರೆ, ಅವರು ಮಾತ್ರ ದೇಶಭಕ್ತರು, ಬೇರೆಯವರು ಅಲ್ಲ ಎಂಬುದನ್ನು ನಾವು ಒಪ್ಪುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net