ನರೇಂದ್ರಗೆ ರಾಮಚಂದ್ರ ಸಂಸ್ಮರಣಾ ಪ್ರಶಸ್ತಿ

narendra kota
ನರೇಂದ್ರ ಕೋಟ
Published on

ಕೋಟ: ಕಾರ್ಕಳದಲ್ಲಿ ಸಾಹಿತ್ಯ ಸಂ ಸ್ಥಾಪಿಸಿ ನಾಡಿನ ಪ್ರಸಿದ್ಧ ಸಾಹಿತಿಗಳನ್ನು ಕಾರ್ಕಳಕ್ಕೆ ಕರೆತಂದ ಹಿರಿಮೆ ಹೊಂದಿರುವ ಎಂ. ರಾಮಚಂದ್ರ ಅವರು ಕನ್ನಡದ ಪರಿಚಾರಕರಾಗಿ ಪ್ರಸಿದ್ಧರಾದವರು. ಇವರ ಸವಿ ನೆನಪಿಗಾಗಿ ನೀಡುವ ಪ್ರೊ.ಎಂ.ರಾಮಚಂದ್ರ ಸಂಸ್ಮರಣಾ ಪ್ರಶಸ್ತಿಗೆ ಶಿಕ್ಷಕ ನರೇಂದ್ರ ಕುವಾರ್ ಕೋಟ ಆಯ್ಕೆಯಾಗಿದ್ದಾರೆ. ಉಸಿರು ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಕಳೆದ 25 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದಾರೆ. ಮಕ್ಕಳಲ್ಲಿ ಕನ್ನಡದ ಪ್ರೀತಿ ಮತ್ತು ಸಾಹಿತ್ಯ ರಚನೆಯ ಅಭಿರುಚಿ ಮೂಡಿಸಲು ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಅವರು ಇಪ್ಪತ್ತಾರು ವೈವಿಧ್ಯಮಯ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಜೂ.5ರಂದು ಕಾರ್ಕಳದ ಪ್ರಕಾಶ್ ಹೋಟೆಲ್‌ನ ಸಂಭ್ರಮ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ವಾಡಲಾಗುವುದೆಂದು ಸಾಹಿತ್ಯ ಸಂ ಕಾರ್ಕಳ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net