

ಹೊಳೆನರಸೀಪುರ: ಮಹಿಳೆಯರ ಸಬಲೀಕರಣದಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಕೆ.ಎಚ್.ಸಪ್ನಾ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಂ.1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ ವತಿಯಿಂದ ಏರ್ಪಡಿಸಿದ್ದ ‘ನಾರಿ ನಿನಗೊಂದು ಸ್ಯಾರಿ ಲಕ್ಕಿ ಡಿಪ್’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ರೀತಿ ಕಾರ್ಯಕ್ರಮಗಳಿಂದ ಮಹಿಳೆಯರು ಸಹ ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ನಿತ್ಯವೂ ದಿನಪತ್ರಿಕೆಗಳನ್ನು ಓದುವುದರಿಂದ ಸಾಮಾನ್ಯ ಜ್ಞಾನ ಹೆಚ್ಚಾಗುತ್ತದೆ ಎಂದರು.
ಪುರಸಭೆ ಅಧ್ಯಕ್ಷೆ ಜ್ಯೋತಿ ಮಂಜುನಾಥ್, ಮೀನುಗಾರಿಕೆ ಇಲಾಖೆ ಅಧಿಕಾರಿ ಸುಮಾ, ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರೇಮಾ ಮಂಜುನಾಥ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಜಯರಾಮ್, ವಿಜಯವಾಣಿ ಮೈಸೂರು ಬ್ಯುರೋ ಸ್ಥಾನಿಕ ಸಂಪಾದಕ ಎಂ.ಆರ್.ಸತ್ಯನಾರಾಯಣ, ಜಾಹೀರಾತು ವ್ಯವಸ್ಥಾಪಕ ದೀಪಕ್ ಘಾಟ್ಕೆ, ಅಂಗನವಾಡಿ ಕಾರ್ಯಕರ್ತೆಯರಾದ ವೀಣಾ, ವಿಜಯಕುಮಾರಿ, ಎಚ್.ಕೆ.ಗೀತಾ, ಸೀತಾಲಕ್ಷ್ಮೀ, ಅನಸೂಯಾ, ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.