

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ನೀಡುವ ‘ಅತ್ಯುತ್ತಮ ರಂಗಕೃತಿ’ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಡಾ. ರಾಮಕೃಷ್ಣ ಮರಾಠೆ ಅವರ ‘ರಂಗಭೂಮಿಯ ಸ್ವಾತಂತ್ರ್ಯ ಸಂಗ್ರಾಮ’ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿ 25 ಸಾವಿರ ರೂ. ನಗದು ಪುರಸ್ಕಾರ ಒಳಗೊಂಡಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ.ಎಂ.ಎಸ್. ಆಶಾದೇವಿ, ಬಿ.ಆರ್. ವೆಂಕಟರಮಣ ಐತಾಳ್ ಮತ್ತು ಡಾ. ಜಯದೇವಿ ಗಾಯಕವಾಡ ಅವರಿದ್ದರು ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.