‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 31ರಂದು

Veena
Published on

ಧಾರವಾಡ: ನಗರದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ವರಕವಿ ಡಾ. ದ.ರಾ. ಬೇಂದ್ರೆ ಅವರ ಜನ್ಮದಿನದ ಅಂಗವಾಗಿ ಕೊಡಮಾಡುವ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಜ. 31ರಂದು ಆಯೋಜಿಸಲಾಗಿದೆ.

ಧಾರವಾಡದ ನವೋದಯ ಸಾಹಿತ್ಯದ ಸೀ ಸಂವೇದನೆಯ ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ ಹಾಗೂ ಬೆಂಗಳೂರಿನ ಕವಿ, ವಿಮರ್ಶಕ, ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬೇಂದ್ರೆ ಭವನದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ 50 ಸಾವಿರ ರೂಪಾಯಿ ನಗದು, ಪ್ರಶಸ್ತಿ ಲಕ ಒಳಗೊಂಡಿದೆ ಎಂದರು.

ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸೊಲಗಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net