

ಮೈಸೂರು: ನಗರದ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದಲ್ಲಿ ಶನಿವಾರ 7ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ಸಿ.ಎಚ್. ವಿಜಯಶಂಕರ್ ಮಾತನಾಡಿ, ನಮ್ಮ ದೇಶದ ಆಯುರ್ವೇದ ವೈದ್ಯ ಪದ್ಧತಿಯು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆಯಲು ಪ್ರಾರಂಭಿಸಿದ್ದು, ಆಯುರ್ವೇದದ ಕುರಿತು ಮತ್ತಷ್ಟು ಜನರಿಗೆ ತಿಳಿಸುವ ಕಾರ್ಯವನ್ನು ವೈದ್ಯರು ಮಾಡಬೇಕು ಎಂದು ಕರೆ ನೀಡಿದರು.
ಮೈಸೂರಿನ ಅರ್ಕಧಾಮ ಸ್ಥಾಪಕ ಶ್ರೀನಿವಾಸ್, ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್, ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್. ಹೆಗಡೆ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ, ಔಷಧ ಪರಿವೀಕ್ಷಕಿ ಡಾ.ವೇದವತಿ, ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀನಾರಾಯಣ ಶೆಣೈ ಹಾಗೂ ಇತರರು ಇದ್ದರು.