ಡಿಪ್ಲೊಮಾ ಲ್ಯಾಟರಲ್ ಎಂಟ್ರಿ ಪ್ರವೇಶಕ್ಕೆ ಅರ್ಜಿ

Published on

ಮಂಗಳೂರು: ಮಂಗಳೂರಿನ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 2024-25ನೇ ಸಾಲಿನ ಅರೆಕಾಲಿಕ(ಪಾರ್ಟ್ ಟೈಮ್) ದ್ವಿತೀಯ ವರ್ಷದ ಲ್ಯಾಟರಲ್ ಎಂಟ್ರಿ ಡಿಪ್ಲೊಮಾ ಪ್ರವೇಶಕ್ಕೆ ಮೆಕಾನಿಕಲ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಬಂಧಪಟ್ಟ ವಿಷಯದಲ್ಲಿ ಎರಡು ವರ್ಷಗಳ ತಾಂತ್ರಿಕ ಸೇವಾನುಭವ ಹೊಂದಿರುವ ಹಾಗೂ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿದ ನಂತರ ಯಾವುದೇ ಅವಧಿಯಲ್ಲಿ ಎರಡು ವರ್ಷಗಳ ಐಟಿಐ ಕೋರ್ಸ್, ದ್ವಿತೀಯ ಪಿಯುಸಿ ವಿಜ್ಞಾನ, ತಾಂತ್ರಿಕ ವಿಷಯಗಳಲ್ಲಿ ಕರ್ನಾಟಕದಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿ.31 ಕೊನೆಯ ದಿನ. ಪ್ರವೇಶ ಪ್ರಕ್ರಿಯೆಯನ್ನು ಜ.4ರೊಳಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net