

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಕೆಪಿಇಎಸ್ ಡಾ. ಜಿ.ಎಂ. ಪಾಟೀಲ ಕಾನೂನು ಕಾಲೇಜು, ಎಲ್ಪಿಜಿ ಕಂಪನಿಗಳಾದ ಬಿಪಿಸಿ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವನ್ನು ಡಿ. 24ರಂದು ಬೆಳಗ್ಗೆ 10 ಗಂಟೆಗೆ ಕೆಪಿಇಎಸ್ ಡಾ. ಜಿ.ಎಂ.ಪಾಟೀಲ ಕಾನೂನು ಕಾಲೇಜನಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆ ವಿಶಾಲಾ ಬೊಳಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಪ್ರಭು ಹಿರೇಮಠ, ಹಿರಿಯ ನ್ಯಾಯವಾದಿ ಬಿ.ವಿ. ಸೋಮಾಪುರ, ಶಿವಕುಮಾರ, ಸಂಜೀವಕುಮಾರ, ಮಾಧುರಿ ಕುಲಕರ್ಣಿ ಅತಿಥಿಗಳಾಗಿ ಭಾಗವಹಿಸುವರು. ನಿವೃತ್ತ ರೈಲ್ವೆ ಅಧಿಕಾರಿ ಬಸವರಾಜ ಬಿಳಿಅಂಗಡಿ ಅವರು ಆಹಾರ ಅಪವ್ಯಯ ಪ್ರಾತ್ಯಕ್ಷಿಕೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.