ರಾಷ್ಟ್ರ ರಕ್ಷಣೆ, ಸ್ವಯಂ ಶಿಸ್ತು ಪ್ರೇರಣದಾಯಕ

gan
Published on

ಕುಂದಾಪುರ: ರಾಷ್ಟ್ರ ರಕ್ಷಣೆ ಮತ್ತು ಸ್ವಯಂ ಶಿಸ್ತಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹೆಚ್ಚು ಪ್ರೇರಣಾದಾಯಕ ಎಂದು ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ನೇತೃತ್ವದಲ್ಲಿ ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹದಲ್ಲಿ ಭಾರತ್ ಸ್ಕೌಟ್ಸ್- ಗೈಡ್ಸ್ ರ‌್ಯಾಲಿ, ಕಬ್ಸ್-ಬುಲ್ ಬುಲ್ ಉತ್ಸವ-2025 ಗುರುವಾರ ಉದ್ಘಾಟಿಸಿ ಮಾತನಾಡಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲೆ ಸಂಸ್ಥೆ ಅಧ್ಯಕ್ಷೆ ಗುಣರತ್ನ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಸ್ಥೆ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಅವರನ್ನು ಗೌರವಿಸಲಾಯಿತು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಶಿಬಿರಕ್ಕೆ ಭೇಟಿ ನೀಡಿದರು.

ಉದ್ಯಮಿ ರವಿರಾಜ ಉಪಾಧ್ಯಾಯ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲೆ ಸಂಸ್ಥೆ ರೇಖಾ ಉಪಸ್ಥಿತರಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕ ವೀರೇಂದ್ರ ಸ್ವಾಗತಿಸಿದರು. ಶಿಕ್ಷಕಿ ತಾರ ವಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಆನಂದ ಅಡಿಗ ಪ್ರಸ್ತಾವಿಸಿದರು. ಸದಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net