ರಾಷ್ಟೀಯ ಡೆಂಗಿ ದಿನ : ಬೀದಿಗಳಲ್ಲಿ ಜನ ಜಾಗೃತಿ ರ‌್ಯಾಲಿ

raichur
raichur
Published on

ರಾಯಚೂರು ಡೆಂಗಿ ರೋಗ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡಬೇಕು. ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಬೇಕೆಂದು ಪ್ರಭಾರಿ ಡಿಎಚ್‌ಓ ಡಾ.ಗಣೇಶ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಡೆಂಗಿ ದಿನಾಚರಣೆ ನಿಮಿತ್ತ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗದಿಂದ ಶುಕ್ರವಾರ ಡೆಂಗಿ ಕುರಿತ ಜನಜಾಗೃತಿ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿ,

ಪರಿಶೀಲನೆ, ಸ್ವಚ್ಚಗೊಳಿಸಿ, ಮುಚ್ಚಿಡಿ ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಡೆಂಗಿ ದಿನ ಆಚರಿಸಲಾಗುತ್ತಿದೆ. ಸೊಳ್ಳೆಗಳ ನಿಯಂತ್ರಣವೊಂದೆ ಡೆಂಗೆ ರೋಗದ ಹತೋಟಿಗೆ ಮುಖ್ಯ ವಿಧಾನ. ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ ಬ್ಯಾರಲ್, ಎರ್‌ಕೂಲರ್, ಮಣ್ಣಿನ ಮಡಿಕೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ತಿಕ್ಕಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ಬಯಲಿನಲ್ಲಿರುವ ತ್ಯಾಜ್ಯವಸ್ತುಗಳಾದ ಟಯರ್, ಎಳನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹಣವಾಗದಂತೆ ಎಚ್ಚರ ವಹಿಸಬೇಕು. ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು ಎಂದರು.

ನಂತರ ಜಾಥಾವು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಪ್ರಾರಂಭವಾಗಿ ಭಗತ್‌ಸಿಂಗ್ ವೃತ್ತದ ಮಾರ್ಗವಾಗಿ ತಿನ್‌ಕಂದಿಲ್, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮೂಲಕ ಮಹಾವಿರ ವೃತ್ತದವರೆಗೆ ಸಾಗಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಂ.ಡಿ.ಶಾಕೀರ್, ಮನೋರೊಗ ತಜ್ಞ ಡಾ.ಮನೊಹರ್ ಪತ್ತಾರ್, ಸಂಧ್ಯಾ ನಾಯಕ ಸೇರಿದಂತೆ ಅನೇಕರು ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net