

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಡಿ. 22ರಂದು ಮಧ್ಯಾಹ್ನ 3.40ಕ್ಕೆ ಸನಾತನ ಸಂಸ್ಕೃತಿ ಶೀರ್ಷಿಕೆ ಅಡಿ ರಾಷ್ಟ್ರೊತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಆಗಮಿಸಲಿದ್ದಾರೆ. ರಾಷ್ಟ್ರೊತ್ಥಾನ ಪರಿಷತ್ ಬೆಂಗಳೂರಿನ ಪ್ರಧಾನ ಕಾರ್ಯದರ್ಶಿ ದಿನೇಶ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲೆ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ, ಆಡಳಿತಾಧಿಕಾರಿ ಕುಮಾರಸ್ವಾಮಿ ಕುಲಕರ್ಣಿ, ಶಿಕ್ಷಕರು ಉಪಸ್ಥಿತರಿರುವರು. ನಂತರ ಶಾಲೆ ವಿದ್ಯಾರ್ಥಿಗಳಿ೦ದ ನೃತ್ಯ, ನಾಟಕ ಸೇರಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿದ್ಯಾ ಕೇಂದ್ರದ ಪ್ರಾಚಾರ್ಯೆ ಡಾ. ಅನಿತಾ ರೈ. ತಿಳಿಸಿದ್ದಾರೆ.