ಮೀನುಗಾರಿಕೆ ಪ್ರೋತ್ಸಾಹಿಸಲು ಸರ್ಕಾರದಿಂದ ಸೌಲಭ್ಯ: ಉಪನಿರ್ದೇಶಕ ಬಾಬಾಸಾಬ್ ಮಾಹಿತಿ

1 (2)
Published on

ಮಂಡ್ಯ: ಮೀನುಗಾರಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಹಲವು ಸೌಲಭ್ಯ ನೀಡಲಾಗುತ್ತಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾಸಾಬ್ ಹೇಳಿದರು.

ರಾಷ್ಟ್ರೀಯ ಮೀನು ಕೃಷಿಕರ ದಿನದ ಅಂಗವಾಗಿ ನಗರದ ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತರಿಗೆ ಮೀನುಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಅಪೌಷ್ಠಿಕತೆ ನೀಗಿಸುವಲ್ಲಿ ಮೀನುಗಾರಿಕೆ ಕ್ಷೇತ್ರದ ಪಾಲು ಅಪಾರ. ಪ್ರಪಂಚದ ಒಟ್ಟು ಜನಸಂಖ್ಯೆಯಲ್ಲಿ ಶೇ.8ರಷ್ಟು ಜನರಿಗೆ ಮೀನುಗಾರಿಕೆ ಜೀವನದ ಆಧಾರವಾಗಿದೆ. ಮೀನುಗಾರಿಕೆ ಪ್ರೋತ್ಸಾಹಿಸಲು ಹೊರ ಜಿಲ್ಲೆಗೆ ಮೀನುಗಳನ್ನ ಸಾಗಿಸಲು ಅನುಕೂಲವಾಗುವಂತೆ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ವಾಹನದ ಸೌಲಭ್ಯ ಮತ್ತು ಮೀನುಗಾರಿಕೆಗೆ ಬೇಕಾಗುವ ಸಲಕರಣೆಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರದಿಂದ ಕಲ್ಪಿಸುತ್ತಿದೆ ಎಂದು ಹೇಳಿದರು.

ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎನ್.ಲೋಕೇಶ್, ಪ್ರಗತಿಪರ ಮೀನು ಕೃಷಿಕ ಮಂಚೇಗೌಡ, ಮೀನುಗಾರಿಕೆ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಗಾಯತ್ರಿ, ಮಹದೇವಸ್ವಾಮಿ, ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net