

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ಸೆ. 11ರಂದು ಬೆಳಗ್ಗೆ 8.45ಕ್ಕೆ ಕೆ.ಸಿ. ಪಾರ್ಕ್ ಹತ್ತಿರದ ಅರಣ್ಯ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಧೀಶೆ ಬಿ.ಜಿ. ರಮಾ ಅತಿಥಿಯಾಗಿ ಭಾಗವಹಿಸುವರು. ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಽಕಾರಿ ಡಿ. ಯತೀಶಕುಮಾರ ಅಧ್ಯಕ್ಷತೆ ವಹಿಸುವರು ಎಂದು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಽಕಾರಿ ವಿವೇಕ ಕವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.