

ಹಿರೇಕೆರೂರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ಜು. 12ರಂದು ತಾಲೂಕಿನ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ ಏರ್ಪಡಿಸಲಾಗಿದೆ.
ಜು. 12ರಂದು ಸಾರ್ವಜನಿಕರು ಹಿರೇಕೆರೂರ ಮತ್ತು ರಟ್ಟಿಹಳ್ಳಿ ನ್ಯಾಯಾಲಯಗಳಲ್ಲಿ ತಮ್ಮ ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣದ ಪರಿಹಾರಕ್ಕಾಗಿ ಈ ಅದಾಲತ್ ಕಾರ್ಯಕ್ರಮದಲ್ಲಿ ಒಂದು ಸುವರ್ಣಾವಕಾಶ ಕಲ್ಪಿಸಲಾಗಿದೆ.
ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಬೌನ್ಸ್, ಬ್ಯಾಂಕ್ ಸಾಲ ವಸೂಲಾತಿ, ವಿದ್ಯುತ್ ಹಾಗೂ ನೀರಿನ ಶುಲ್ಕ ಸೇರಿದಂತೆ ರಾಜಿಯಾಗಬಲ್ಲ ಅಪರಾಧಿತ ಮತ್ತು ಇತರೆ ಸಿವಿಲ್ ಪ್ರಕರಣಗಳು, ಮೋಟಾರು ವಾಹನದ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಅಮಲ್ಲಾರಿ, ಹಿಸ್ಸಾ ಕೋರಿ ಹೂಡಿರುವ ದಾವೆಗಳು, ಕಂದಾಯ ಸೇರಿದಂತೆ ಅನೇಕ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ಬಾಂಧವ್ಯ ಉಳಿಸಿಕೊಂಡು ಸೌಹಾರ್ದದಿಂದ ಬಾಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತಹ ಪ್ರಕರಣವನ್ನು ತೀರ್ವನಿಸುವುದರಿಂದ ಬಾಂಧವ್ಯದಿಂದಲೂ ಸಾಧ್ಯವಾಗಲಿದೆ. ಉಚಿತವಾಗಿ ರಾಜಿ ಸಂಧಾನ ಮಾಡಲಾಗುವುದು.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.