

ಬಳ್ಳಾರಿ: ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕ್ಯಾಸನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಕಾರಿನಲ್ಲಿ ಹೊಸಪೇಟೆ ಕಡೆಗೆ ಚಲಿಸುತ್ತಿದ್ದ ಮೂವರು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರ ಹೆಸರು ಇನ್ನು ಗೊತ್ತಾಗಿಲ್ಲ.
ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಟಿಪ್ಪರ್ ಹಾಗೂ ಕಾರು ಹೊಸಪೇಟೆ ಕಡೆ ಚಲಿಸುತ್ತಿದ್ದವು. ವೇಗವಾಗಿ ಬಂದ ಕಾರು ಟಿಪ್ಪರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ನಂತರ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಕೂಡ್ಲಿಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)