

ಮಡಿಕೇರಿ:
ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿAದ ಮಡಿಕೇರಿ ನಡುವಿನ 90.05 ಕಿ.ಮೀ.ನಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಜು.18ರಿಂದ ಜು. 22ರ ತನಕ ಪ್ರತಿ ದಿನ ರಾತ್ರಿ 8.00 ಗಂಟೆಯಿAದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿüಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಕರ್ತೋಜಿಯ ಕಿ.ಮೀ.90.10ರ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬAಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಈ ಮಾರ್ಗದಲ್ಲಿ ನಿರ್ಬಂಧಿತ ಅವಧಿಯಲ್ಲಿ ಮೈಸೂರು, ಬೆಂಗಳೂರು ಮುಂತಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.