ಕನ್ಯಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತ

kanyana
ಕನ್ಯಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿರುವುದು.
Published on

ಹೆಬ್ರಿ: ರಾಷ್ಟ್ರೀಯ ಹೆದ್ದಾರಿ 169ಎ ಕನ್ಯಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಮಣ್ಣು ತೆಗೆದಿರುವುದರಿಂದ ಮಣ್ಣು ಕುಸಿದು ಆತಂಕ ಉಂಟು ಮಾಡಿವೆ.

ಕೆಲವು ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ವಿದ್ಯುತ್ ತಂತಿ ಸಮೀಪದಲ್ಲಿ ಹಾದು ಹೋಗಿರುವುದರಿಂದ ಅಪಾಯವಿದೆ. ಮೇಲ್ಭಾಗದಲ್ಲಿ ಅನೇಕ ಮನೆಗಳಿದ್ದು, ಸಂಬಂಧಪಟ್ಟವರು ಯಾವುದೇ ಕ್ರಮ ವಹಿಸಿಲ್ಲ.
ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಎಸ್ ಎ ಪ್ರಸಾದ್ ಭೇಟಿ ನೀಡಿ ಗುರುವಾರ ಪರಿಶೀಲನೆ ನಡೆಸಿದರು. ಇಒ ಶಶಿಧರ್ ಕೆಜೆ, ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ್ ಬಂಗೇರ, ಗ್ರಾಮ ಆಡಳಿತ ಅಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net