25 ರಂದು ರಾಷ್ಟ್ರ ಮಟ್ಟದ ಸಮ್ಮೇಳನ

Digital Rupee
Published on

ಮೈಸೂರು: ನಗರದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಡಿಜಿಟಲ್ ಯುಗದಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳು ಮತ್ತು ಸವಾಲುಗಳು’ ವಿಷಯ ಕುರಿತು ರಾಷ್ಟ್ರಮಟ್ಟದ ಸಮ್ಮೇಳನ ಹಾಗೂ ಕಾಲೇಜಿನ ಐಪಿ ಸೆಲ್ ಉದ್ಘಾಟನಾ ಕಾರ್ಯಕ್ರಮವನ್ನು ನ.25ರಂದು ಬೆಳಗ್ಗೆ 9.30ಕ್ಕೆ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಎಸ್.ಮರಿಗೌಡ ಹೇಳಿದರು.


ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಸ್ತುತ ತಂತ್ರಜ್ಞಾನ ಯುಗದಲ್ಲಿ ಅಸ್ತಿತ್ವದಲ್ಲಿರುವ ಬೌದ್ಧಿಕ ಆಸ್ತಿ ಆಡಳಿತ ಸಮಯದ ಬದಲಾವಣೆಯೊಂದಿಗೆ ಗಮನಾರ್ಹ ಮಾದರಿ ಬದಲಾವಣೆಗೆ ಸಾಕ್ಷಿಯಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಾಧ್ಯಾಪಕರಾದ ಡಾ.ಗೋವರ್ಧನ್, ಪ್ರೊ.ಎನ್.ಗೀತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net