ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿ 24 ರಿಂದ

Where-to-watch-and-play-cricket-in-Riyadh
Published on

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ, ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸ್ಮರಣಾರ್ಥ 15 ನೇ ಬಾರಿಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಟೂರ್ನಿಯನ್ನು ನ.24ರಿಂದ 27ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಘದ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿಯಿಂದ, ಅಲ್ಲದೇ ಕೇರಳ, ತಮಿಳುನಾಡು, ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಒಟ್ಟು 32 ತಂಡಗಳ 360 ಆಟಗಾರರು ಭಾಗವಹಿಸುವರು ಎಂದರು.

ಟೂರ್ನಿಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 4,05,555 ರೂ, ಶಾಮನೂರು ಡೈಮಂಡ್ ಕಪ್ ದ್ವಿತೀಯ ಸ್ಥಾನಕ್ಕೆ 3,05,555 ರೂ, ಶಿವಗಂಗಾ ಕಪ್ ತೃತೀಯ ಬಹುಮಾನ 1,25,555 ರೂ. ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು.

ಉತ್ತಮ ಆಲ್‌ರೌಂಡರ್‌ಗೆ ವೈಯಕ್ತಿಕ ಬಹುಮಾನವಾಗಿ ಹೀರೋ ಹೊಂಡಾ ಬೈಕ್ ನೀಡಲಾಗುವುದು ಎಂದು ಹೇಳಿದರು. ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಭಿಮಾನಿಗಳಿಗೆ ಮೈದಾನದಲ್ಲಿ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು. ಮೂರನೇ ತೀರ್ಪುಗಾರರು ಇರಲಿದ್ದು ಎಲ್ಲ ಪಂದ್ಯಗಳನ್ನು ಯೂ ಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net