ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

KSOU
Published on

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ 5 ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜುಲೈ 25 ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶರಣಪ್ಪ ವಿ.ಹಲ್ಸೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ರವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net