ರಾಷ್ಟ್ರ ಮಟ್ಟದ ಫುಟ್‌ಬಾಲ್ ಪಂದ್ಯಾವಳಿ ನಾಳೆಯಿಂದ

Published on

ಸಿದ್ದಾಪುರ: ಜಿಲ್ಲೆಯಲ್ಲಿ ನಿರಂತರವಾಗಿ ಸಮಾಜ ಸೇವೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಜಿಲ್ಲೆಯ ಪ್ರತಿಷ್ಠಿತ ಸಂಘಗಳಲ್ಲಿ ಮುಂಚೂಣಿಯಲ್ಲಿರುವ ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಡಿ.24 ಮತ್ತು 25 ರಂದು ರಾಷ್ಟ್ರಮಟ್ಟದ ಅಂಡರ್ 20 ಯುವಕರ ಫುಟ್‌ಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸವಾದ್ ಉಸ್ಮಾನ್ ತಿಳಿಸಿದ್ದಾರೆ.

ಡಿ.24ರಂದು ಬೆಳಗ್ಗೆ 9.45 ಉದ್ಘಾಟನೆಯಾಗಲಿರುವ ಫುಟ್‌ಬಾಲ್ ಪಂದ್ಯಾವಳಿಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಇಸ್ಮಾಯಿಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವ ಕಾಂಗ್ರೆಸ್ ಮುಖಂಡ ಮೈಸಿ ಕತ್ತಣಿರ, ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಧ್ಯಕ್ಷ ಜಾನ್ಸನ್ ಪಿಂಟೋ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸಿ.ಇ. ತೀರ್ಥಕುಮಾರ್, ಚೆಟ್ಟಳ್ಳಿ ಪ್ರೌಢಶಾಲಾ ಆಡಳಿತ ಮಂಡಳಿ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಹಾಗೂ ಚೆಟ್ಟಳ್ಳಿಯ ಪ್ರಸಾದ್ ವೈನ್ಸ್ ರೈಮಂಡ್ ರಮ್ಮಿ ಭಾಗವಹಿಸಲಿದ್ದಾರೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸವಾದ್ ಉಸ್ಮಾನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net