

ಕುಂದಾಪುರ : ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಆಯೋಜಿಸಿದ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವರ್ಷದವರೊಳಗಿನ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಿದ್ದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.