ಬಂಟ್ವಾಳ ಡೈಮಂಡ್ ಇಂಟರ್‌ನ್ಯಾಷನಲ್ ಶಾಲೆ ಚಾಂಪಿಯನ್ : ಮೂಡುಬಿದಿರೆಯಲ್ಲಿ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ

05
Published on

ಮೂಡುಬಿದಿರೆ: ಇಲ್ಲಿನ ಕನ್ನಡ ಭವನದಲ್ಲಿ ನಡೆದ 8ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಂಟ್ವಾಳದ ಡೈಮಂಡ್ ಇಂಟರ್‌ನ್ಯಾಷನಲ್ ಸ್ಕೂಲ್ ಅತ್ಯುತ್ತಮ ಪ್ರದರ್ಶನ ನೀಡಿ ಓವರ್ ಆಲ್ ಚಾಂಪಿಯನ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. ರನ್ನರ್ಸ್ ಚಾಂಪಿಯನ್ ಪ್ರಶಸ್ತಿಯನ್ನು ಬುಡೋಕಾನ್ ಕರಾಟೆ ಆ್ಯಂಡ್ ಸೆಲ್ಫ್ ಡಿಫೆನ್ಸ್ ಸ್ಕೂಲ್ ಬೆಳ್ಮಣ್ ಪಡೆದುಕೊಂಡಿತು.

ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂ.ಕೆ.ಅನಂತ್ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಆಶ್ರಯದಲ್ಲಿ ಪಂದ್ಯಾಟ ನಡೆಯಿತು.

ಬುರೂಜ್ ಆಂಗ್ಲ ಮಾಧ್ಯಮ ಶಾಲೆ ರಝ್ ನಗರ, ಅಜುಮ್ ಅಲ್ ಬಿರ್ರ್ ಇಂಟರ್‌ನ್ಯಾಷನಲ್ ಶಾಲೆ ಮೂಡುಬಿದಿರೆ, ಸಹಾರ ಆಂಗ್ಲ ಮಾಧ್ಯಮ ಶಾಲೆ ಅಡ್ಡೂರು, ಅಲ್ ಹುದಾ ಇಂಟರ್‌ನ್ಯಾಷನಲ್ ಶಾಲೆ ಮಂಗಳೂರು ಉತ್ತಮ ಪ್ರದರ್ಶನ ನೀಡಿದವು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಬಿಜೆಪಿ ಮುಖಂಡ ಸುದರ್ಶನ್ ಎಂ., ಎಂ.ಕೆ.ಅನಂತ್ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜುಕೇಶನ್‌ನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಅಬುಲ್ ಅಲಾ, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ರಾಹುಲ್ ಟಿ.ಜಿ, ಉಪಾಧ್ಯಕ್ಷ ಅರುಣ್ ಕುಮಾರ್ ನಿಟ್ಟೆ, ಅಂತಾರಾಷ್ಟ್ರೀಯ ತರಬೇತುದಾರ ಸ್ವಾಮಿ ಪ್ರಸಾದ್, ರಾಜ್ಯ ಕರಾಟೆ ಶಿಕ್ಷಕರ ಸಂಘದ ಉಪಾಧ್ಯಕ್ಷ ಸತೀಶ್ ಬೆಳ್ಮಣ್, ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್, ಕೀರ್ತಿ ಜಿ.ಕೆ ಹಾಗೂ ವಾಮನ್ ಪಾಲನ್ ವಿಜೇತರಿಗೆ ಬಹುಮಾನ ವಿತರಿಸಿದರು.

ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಮುಹಮ್ಮದ್ ನದೀಮ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಅಂಚನ್ ತೀರ್ಪುಗಾರರಾಗಿದ್ದರು. ಶಿಕ್ಷಕ ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net