

ರಾಯಚೂರು ಬೆಳಕು ಸಾಹಿತ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಿಂದ ಸೆ.21ರಂದು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನವನ್ನು ಆಯೋಜಿಸಲಾಗಿದೆಂದು ಸಂಸ್ಥೆಯ ಸಂಸ್ಥಾಪಕ ಅಣ್ಣಪ್ಪ ಮೇಟಿಗೌಡ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರನ್ನಾಗಿ ಮಂಡ್ಯ ಜಿಲ್ಲೆಯ ನಾಗಮಂಗಲದ ಸಾಹಿತಿ ಚಿಕ್ಕಣ್ಣ.ಡಿ.ಪಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮವನ್ನು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ.ಸೋಮಶೇಖರ ಉದ್ಘಾಟಿಸಲಿದ್ದಾರೆ.
ವಿವಿಧ ಕ್ಷೇತ್ರಗಳ ಸಾಧಕರಿಗೆ ಸಣ್ಣನೀರಾವರಿ ಸಚಿವ ಎನ್.ಎಸ್..ಬೋಸರಾಜ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಳಕಿನ ಬುತ್ತಿ ಕವನ ಸಂಕಲನವನ್ನು ಜಿಲ್ಲಾಧಿಕಾರಿ ನಿತೀಶ್ ಕೆ. ಬಿಡುಗಡೆಗೊಳಿಸಲಿದ್ದಾರೆ. ಸಂಘಟನಾ ನುಡಿಗಳನ್ನು ಕರ್ನಾಟಕ ವಿಚಾರ ವೇದಿಕೆಯ ಅಧ್ಯಕ್ಷ ಪಾಲನೇತ್ರ ಮಾತನಾಡಲಿದ್ದಾರೆ. ಎಸ್ಪಿ ಎಂ.ಪುಟ್ಟಮಾದಯ್ಯ, ವಿಶೇಷ ಅತಿಥಿಗಳಾಗಿ ಶಾಸಕ ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತ ಕುಮಾರ ಸೇರಿ ಅನೇಕರು ಆಗಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಮಾರುತಿ ಬಡಿಗೇರ, ಬಸವರಾಜ, ಅಂಬು ಪಾಟೀಲ್ ಇದ್ದರು.