

ತೂಬಗೆರೆ : ತೂಬಗೆರೆ ಹಲಸು ತನ್ನ ಬಣ್ಣ, ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿರುವ ಹಿನ್ನೆಲೆಯಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು ಭಾಕೃಅಪ& ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಹಯೋಗದಲ್ಲಿ ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ ಮತ್ತು ಕೃಷಿ&ವಿಜ್ಞಾನಿಗಳೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ (ಪಿಪಿಎಫ್ಆರ್ಎ) ದಿಂದ ತೂಬಗೆರೆ ಸುತ್ತಮುತ್ತಲಿನ ಎಂಟು ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೇ ಉತಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ (ಪೇಟೆಂಟ್) ಪ್ರಮಾಣ ಪತ್ರವನ್ನು ವಿಶ್ರಾಂತ ಕುಲಪತಿ ನಾರಾಯಣ ಗೌಡ ವಿತರಿಸಿದರು.
ವಿಶ್ರಾಂತ ಕುಲಪತಿ ನಾರಾಯಣ ಗೌಡ ಮಾತನಾಡಿ, ಹಲಸಿನ ಹಣ್ಣಿನ ಬಗ್ಗೆ ಕೆಲವು ವರ್ಷಗಳಿಂದ ಸಂಶೋಧನೆಗಳು ನಡೆಯುತ್ತಿವೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಹಲಸಿನ ಹಣ್ಣುಗಳಲ್ಲಿರುವ ಔಷಧೀಯ ಗುಣ, ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳನ್ನು ತಯಾರಿಸುವ ಸಂಬಂಧ ಸಂಶೋಧನೆ ಮಾಡುತ್ತಿದೆ. ಸ್ಥಳಿಯವಾಗಿ ಹಲಸಿನ ಹಣ್ಣು ಮೌಲ್ಯವರ್ಧನೆ, ಉತ್ಪನ್ನಗಳ ಕುರಿತ ಅರಿವಿಗೆ ಮೂಡಿಸುತ್ತಿದೆ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾಬೋರ್ಹೈಡ್ರೇಟ್ ಅಂಶಗಳು, ಎಲೆಕ್ಟೊ$ಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ. ಆದ್ದರಿಂದ ಈಗ ಪೇಟೆಂಟ್ ಪಡೆದ ರೈತರು ತಮ್ಮ ತಳಿಗಳನ್ನು ಜವಾಬ್ದಾರಿಯಿಂದ ಸಂರಸಬೇಕು ಎಂದರು.
ರೈತರಿಗಾಗಿ ಹಲಸಿನ ಸಾಗುವಳಿ ಮತ್ತು ಮಾರುಕಟ್ಟೆ ಹಲಸಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಹಲಸು ಹಚ್ಚುವ ಯಂತ್ರದ ಕುರಿತು ಜಿಕೆವಿಕೆ ವಿಜ್ಞಾನಿ ಡಾ.ಶಾಮಲಾ ಮಾಹಿತಿ ನೀಡಿದರು.
ಹಲಸಿನ ಹಣ್ಣಿನಿಂದ ತಯಾರಿಸಿದ ಹಪ್ಪಳ, ಚಿಪ್ಸ್, ನಂತಹ ಉತ್ಪನ್ನಗಳ ಪ್ರದರ್ಶನ ಸಹ ನೆಡೆಯಿತು. ಜಿಕೆವಿಕೆ ವಿಜ್ಞಾನಿಗಳಾದ ಡಾ.ಹನುಮಂತರಾಯ, ಡಾ. ಬಾಬು ರೈ, ಡಾ. ಸವಿತಾ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯೆ ಮುನಿಲಕ್ಷ$್ಮಮ್ಮ ರಾಮಕೃಷ್ಣ, ಸದಸ್ಯ ಕೃಷ್ಣಪ್ಪ (ಕಿಟ್ಟಿ), ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ತೂಬಗೆರೆ ಹಲಸು ಬೆಳೆಗಾರರ ಸಂದ ಅಧ್ಯಕ್ಷ ಸುರೇಶ್, ವಕೀಲ ಪ್ರತಾಪ್, ಇದ್ದರು.
ಪ್ರತಿಭಾ ಪುರಸ್ಕಾರ ವಿತರಣೆ : ಎಸ್ಸೆಸ್ಸೆಲ್ಸಿ ಪರೀೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಕ್ರಾಸ್ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಅವರಿಗೆ ಸಂದಿಂದ ಪ್ರತಿಭಾ ಪುರಸ್ಕಾರ ಮಾಡಲಾಯಿತು.
ಸ್ವಾಮ್ಯ ಪಡೆದಿರುವ ರೈತರು : ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೆ ಉತಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ ಪಡೆದಿರುವ ರೈತರು (ಸುರೇಶ, ರವಿಕುಮಾರ, ಅಶೋಕ, ಮುನಿರಾಜು, ಶಿವಕುಮಾರ್, ಮರಿಯಣ್ಣ, ಹರೀಶ್, ಮುನಿಕೃಷ್ಣಪ್ಪ.)
ನಮ್ಮ ಹೊಲದ ಹಲಸಿನ ಹಣ್ಣಿಗೆ ರಾಷ್ಟ್ರ ಮಟ್ಟದ ಮಾನ್ಯತೆ ನೀಡಿರುವುದು ಸಂತಸ ತಂದಿದೆ. ಮುಂದಿನ 20 ವರ್ಷ ಈ ಹಣ್ಣಿನ ತಳಿಯನ್ನು ಬೇರೆ ಯಾರೂ ಬೆಳೆಸಲು ಅವಕಾಶ ಸಿಗುವುದಿಲ್ಲ. ಹಣ್ಣಿನ ಮಾಲೀಕರು ಅನುಮತಿ ನೀಡಿದವರು ಮಾತ್ರ ಸಸಿಗಳನ್ನು ಬೆಳೆಸಿ, ಮಾರಾಟ ಮಾಡಲು ಅವಕಾಶವಿದೆ. | ಕೃಷ್ಣಪ್ಪ ಪಿಪಿಎಫ್ಆರ್ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ತೂಬಗೆರೆ ಸೇರಿ ತಾಲೂಕಿನಲ್ಲಿ 1 ಸಾವಿರ ಟನ್ ಹಲಸು ವಹಿವಾಟು ಆಗಿದೆ. ಯಾವುದೇ ರಸ್ತೆ ಪಕ್ಕ ನೋಡಿದರೂ ಹಲಸು ಕಾಣುತ್ತದೆ. ಬೆಂಗಳೂರು ಅಥವಾ ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪ ಎಲ್ಲ ಸೌಲಭ್ಯ ಒಳಗೊಂಡಂತೆ ಹಲಸು ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ. | ರವಿಕುಮಾರ್ ತೂಬಗೆರೆ ಹಲಸು ಬೆಳೆಗಾರರ ಸಂದ ಕಾರ್ಯದರ್ಶಿ