ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

h4-abacus
Published on

ಹುಬ್ಬಳ್ಳಿ: ನಗರದ ಮದರ್ ಮೇರಿ ಶಾಲೆಯ ವಿದ್ಯಾರ್ಥಿಗಳು ಮಾಸ್ಟರ್ ಮೈಂಡ್ ಅಬಾಕಸ್ ನಡೆಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಯುವರಾಜ ಶ್ರೀಕಾಂತ ತಹಸೀಲದಾರ ಚಿನ್ನದ ಪದಕ ಪಡೆದಿದ್ದು, ಡಿಸೆಂಬರ್‌ನಲ್ಲಿ ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಮಾಸ್ಟರ್ ಮೈಂಡ್ ಅಬಾಕಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಉಳಿದಂತೆ ನಾಲ್ವರು ವಿದ್ಯಾರ್ಥಿಗಳಾದ ಇತನ್ ಕಂಡಿ, ಪ್ರೀತಂ ಮುಗಳಿ, ಜ್ಯೋತಿ ಕುರಟ್ಟಿಮಠ, ದಕ್ಷ ಕೋಲಬಕರ ಚಿನ್ನದ ಪದಕ ಪಡೆದಿದ್ದಾರೆ. ಅಬಾಕಸ್ ಶಿಕ್ಷಕ ಸೈಮನ್ ಕಂಡಿ ತರಬೇತಿ ನೀಡಿದ್ದರು. ಈ ಸ್ಪರ್ಧೆಯಲ್ಲಿ ಭಾರತದಾದ್ಯಂತ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net