ಯೋಗಾಸನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

HUN-AUG-21-2(KAVEESH AND NIKHIL PAIR(
ರಾಜ್ಯಮಟ್ಟದ ಯೋಗಾಸನ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕವೀಶ್ ಮತ್ತು ನಿಖಲ್ ಜೋಡಿ
Published on

ಹುಣಸೂರು: ಕರ್ನಾಟಕ ಯೋಗಾಸನ ಕ್ರೀಡಾಸಂಸ್ಥೆ ಮತ್ತು ಚಿಕ್ಕಮಗಳೂರು ಯೋಗಾಸನ ಸ್ಫೋರ್ಟ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಕಡೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ 5ನೇ ರಾಜ್ಯ ಮಟ್ಟದ ಚಾಂಪಿಯನ್‌ಶಿಪ್‌ನಲ್ಲಿ ಹುಣಸೂರಿನ ವಿ.ಎಸ್.ಕವೀಶ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಯೋಗಾಸನ ಕ್ರೀಡೆಯ ಆರ್ಟಿಸ್ಟಿಕ್ ಪೇರ್ ಜೂನಿಯರ್ ವಿಭಾಗದಲ್ಲಿ ಕವೀಶ್‌ರೊಂದಿಗೆ ದಕ್ಷಿಣ ಕನ್ನಡದ ಬಿ.ಕೆ.ನಿಖಿಲ್ ಭಾಗವಹಿಸಿ ಪ್ರದರ್ಶನ ನೀಡುವ ಮೂಲಕ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗಳಿಸಿ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಹುಣಸೂರು ತಾಲೂಕು ಚಿಲ್ಕುಂದ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ವೀರೇಶ್ ಅವರ ಪುತ್ರ ಕವೀಶ್ ಪ್ರಸ್ತುತ ಮೈಸೂರಿನ ಕುವೆಂಪುನಗರದ ವಿಸ್ಡಮ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net