

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೇಂದ್ರ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ. ವಾರ್ಷಿಕ 12 ಲಕ್ಷ ರೂಪಾಯಿ ಆದಾಯದವರೆಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಭಾರತದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಎಚ್. ನಾಗೂರ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತç ವಿಭಾಗದಿಂದ ಶುಕ್ರವಾರ ಆಯೋಜಿಸಿದ್ದ `ಕೇಂದ್ರ ಬಜೆಟ್ ವಿಶ್ಲೇಷಣೆ' ವಿಷಯ ಕುರಿತ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಮಧ್ಯಮ ವರ್ಗದವರ ಖರೀದಿ ಸಾಮರ್ಥ್ಯದಲ್ಲಿ ಗಣನೀಯ ಹೆಚ್ಚಳವಾಗಲಿದೆ. ಕೃಷಿ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ರೂಪಿಸಲಾಗಿದೆ. ಮೂಲ ಸೌಕರ್ಯ, ತಂತ್ರಜ್ಞಾನ ಹಾಗೂ ಉತ್ಪಾದನಾ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿರುವ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಮುಖ ಔಷಽಗಳ ಮೇಲಿನ ಆಮದು ಸುಂಕವನ್ನು ಸಂಪೂರ್ಣವಾಗಿ ತೆಗೆದು ಹಾಕಿರುವುದು ಪ್ರಶಂಸನೀಯ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ನೀಲಕ್ಕ ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕೇಂದ್ರ ಬಜೆಟ್ ಕುರಿತು ವಿಚಾರ ಮಂಡಿಸಿದರು. ಅತ್ಯುತ್ತಮ ಪ್ರಬಂಧ ಮಂಡಿಸಿದ ಶ್ರೀ ಮೃತ್ಯುಂಜಯ ಕಾಲೇಜಿನ ಮಾಂತೇಶ ಎನ್.ಸಿ., ಕೆಎಲ್‌ಇ ಸಂಸ್ಥೆಯ ಬಿಬಿಎ ಮಹಾವಿದ್ಯಾಲಯದ ನಾಗರಾಜ ತುಳೋಜಿ ಹಾಗೂ ಹುಬ್ಬಳ್ಳಿಯ ಎಸ್‌ಜೆಎಂವಿಎಸ್ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಶ್ರೇಯಾ ಆರ್. ಚುಟಕೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಚೇತನ ಸೊಂಡಿ ಸ್ವಾಗತಿಸಿದರು. ಪ್ರೊ. ರಾಶಿ ಟಾಳಂಕೆ ಪರಿಚಯಿಸಿದರು.
ಐಕ್ಯೂಎಸಿ ಸಂಚಾಲಕ ಪ್ರೊ. ಎಸ್.ಎಸ್. ಸಂಗೊಳ್ಳಿ, ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ಎಸ್.ಬಿ. ಶಿವಳ್ಳಿ, ಅಶೋಕ ಚಿಕ್ಕೋಡಿ, ಸಿ.ಎಸ್. ಪಾಟೀಲ, ಇತರರಿದ್ದರು.