ರಾಷ್ಟ್ರಮಟ್ಟದ ಕಾರ್ಯಾಗಾರ 17ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ಕೆಎಲ್​ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಕಾಲೇಜಿನ ಆಶ್ರಯದಲ್ಲಿ ಮಾ. 17ರಂದು ಹಳೆಗನ್ನಡ ಓದು ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಕೆಎಲ್​ಇ ಸಂಸ್ಥೆ ಬೆಳಗಾವಿ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಡಾ. ವಿ.ಐ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯೆ ಡಾ. ನೀಲಕ್ಕ ಪಾಟೀಲ ಮತ್ತು ಐಕ್ಯೂಐಸಿ ಸಂಯೋಜಕಿ ಪ್ರೊ. ಶ್ರೀದೇವಿ ಸಂಗೊಳ್ಳಿ ಉಪಸ್ಥಿತರಿರುವರು.

ಹಂಪಿ ಕನ್ನಡ ವಿಶ್ವವಿದ್ಯಾಲಯ ಹಸ್ತಪ್ರತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಕೆ. ರವೀಂದ್ರನಾಥ ಅವರು ಹಳೆಗನ್ನಡ ಓದು ಕುರಿತು ಮತ್ತು ನಿವೃತ್ತ ಪ್ರಾಚಾರ್ಯ ಡಾ. ವೈ.ಎಂ.ಯಾಕೊಳ್ಳಿ ಅವರು ಹಳೆಗನ್ನಡ ಸಾಹಿತ್ಯದ ಅವಲೋಕನ ಕುರಿತು ಪ್ರಬಂಧ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net